ಗದಗ:- ಹಿಂದು ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲ, ಜನರ ತೀರ್ಮಾನ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹಿಂದು ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲ, ಅದು ಹಿಂದುಗಳದ್ದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು. ದೇಶದ ಹಿಂದುಗಳು ಹಿಂದು ರಾಷ್ಟ್ರ ಆಗಬೇಕು ಎಂದು ನಿರ್ಧಾರ ಮಾಡಿದ್ದಾರೆ.
ಆಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎನ್ನುವುದು ಇವತ್ತಿನ ತೀರ್ಮಾನ ಅಲ್ಲ, ಸ್ವಾತಂತ್ರ್ಯ ಪೂರ್ವದಿಂದ ಇದರ ಬಗ್ಗೆ ಹೋರಾಟ ಮಾಡಲಾಗುತ್ತಿದೆ. ಜ. 22ರಂದು ಅಯೋಧ್ಯೆಯಲ್ಲಿ ಇಡೀ ಪ್ರಪಂಚವೇ ನೋಡುವ ವಿಶೇಷ ಕಾರ್ಯಕ್ರಮವಾಗುತ್ತದೆ ಎಂದರು.
ಕಾಶಿ ಕುರಿತು ಕೋರ್ಟ ಆರ್ಡರ್ ಆಗಿದೆ, ಮಧುರಾ ಬಗ್ಗೆ ಸರ್ವೇ ಕೊಟ್ಟಿದ್ದಾರೆ. ದೇಶದಲ್ಲಿ ಹೊಸ ಮಸೀದಿಗಳ ಬಗ್ಗೆ ನಾನು ವಿರೋಧ ಮಾಡೋದಿಲ್ಲ. ದೇವಸ್ಥಾನ ಕೆಡವಿ ಕಟ್ಟಿದ ಒಂದೇ ಒಂದು ಮಸೀದಿ ಉಳಿಸೋದಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು