ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಶೇ. 5ಕ್ಕಿಂತಲೂ ಹೆಚ್ಚಾಗಿದೆ. ಭಾರತದಲ್ಲಿ ಇಂದು ಚಿನ್ನ ತೀರಾ ತುಟ್ಟಿಯಾಗುವ ನಿರೀಕ್ಷೆ ಇದೆ. 22 ಗ್ರಾಮ್ ಚಿನ್ನದ ಬೆಲೆ 60 ಸಾವಿರ ರೂ ಆಸುಪಾಸಿಗೆ ಹೋಗುವ ಸಾಧ್ಯತೆ ಇದೆ. ಬೆಳ್ಳೆಯೂ ತುಸು ದುಬಾರಿಯಾಗಿದೆ. ಅಮೆರಿಕದಲ್ಲಿ ಮುಂಬರುವ ಕೆಲ ತಿಂಗಳು ಬಡ್ಡಿದರ ಹೆಚ್ಚಳವಾಗುವ ಸುಳಿವು ಸಿಕ್ಕ ಬಳಿಕ ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗತೊಡಗಿದೆ. ಪರಿಣಾಮವಾಗಿ ಬೆಲೆ ಏರುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,620 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 792 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ