ದಾವಣಗೆರೆ :– ಕಾಂಗ್ರೆಸ್ಸಿಗರು ತಮ್ಮ ಮನೆಗೆ ಟಿಪ್ಪು ಹೆಸರಿಡಲಿ ಎಂದು ಎಂ.ಪಿ.ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸಚಿವರು ತಮ್ಮ ಮನೆಗಳಿಗೆ ಟಿಪ್ಪು ಮಂಜಿಲ್, ಔರಂಗಜೇಬ್ ಮಂಜಿಲ್ ಅಥವಾ ನಿವಾಸ ಅಂತಾ ಹೆಸರಿಟ್ಟುಕೊಳ್ಳಲಿ. ಆದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಾವು ತೀವ್ರವಾಗಿ ಖಂಡಿಸುತ್ತೇವೆ. ಓಟು ಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಕುಕ್ಕರ್ ಬ್ಲಾಸ್ಟ್ ಆದಾಗ ಅಲ್ಪಸಂಖ್ಯಾತರು ತಮ್ಮ ಸಹೋದರರೆಂದು ಇದೇ ಡಿಸಿಎಂ ಡಿ.ಕೆ.ಶಿವಕುಮಾರ ಹೇಳುತ್ತಾರೆ. ಮೈಸೂರು ಮಹಾರಾಜ, ಸುತ್ತೂರು ಶ್ರೀಗಳಂತಹವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಿ. ಆದರೆ, ಓಟು ಬ್ಯಾಂಕ್ಗಾಗಿ ಟಿಪ್ಪುನಂತಹ ಮತಾಂಧರ ಹೆಸರಿಡುವುದಲ್ಲ. ಯಾವುದೇ ಕಾರಣಕ್ಕೂ ಟಿಪ್ಪು ಹೆಸರಿಡಲು ನಾವು ಬಿಡುವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು
ಸಿದ್ದರಾಮಯ್ಯಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಬರ ಪರಿಹಾರವಾಗಿ ಎಕರೆಗೆ 25 ಸಾವಿರ ರು. ನೀಡಲಿ. ನಿಮ್ಮ ಘೋಷಣೆಗಳು, ಭರವಸೆಗಳು ಕೇವಲ ಮಾತಿಗೆ ಸೀಮಿತವಾಗಿದ್ದು, ಕಾರ್ಯ ರೂಪಕ್ಕಂತೂ ಬಂದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬಂದಿಲ್ಲ. ರೈತರಿಗೆ ನೀವು ಕೊಟ್ಟ ಭರವಸೆ ಈಡೇರಿಲ್ಲ. ಶೀಘ್ರವೇ ಕಾಂಗ್ರೆಸ್ ಸರ್ಕಾರದ ವಿರುದ್ದ ಹೊನ್ನಾಳಿ ಕ್ಷೇತ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.