ಬೆಂಗಳೂರು: ರಾಜ್ಯದಲ್ಲಿ ಕೊರೋನ ಮಹಾಮಾರಿ ಮತ್ತೆ ಆಗಮನವಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನಕ್ಕೂ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲೂ ಪ್ರಕರಣಗಳು ಹೆಚ್ಚಾಗುತ್ತಲಿದ್ದು,ಕೆ ಸಿ ಜನರಲ್ ರಾಜೀವ್ ಗಾಂಧಿ ಆಸ್ಪತ್ರೆಯಲ್ಲೂ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್ jn 1 ಹೂಸ ತಳಿಯಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿದ್ದಾರೆ.
ಪ್ರಸ್ತುತ ರಾಜ್ಯಧಲ್ಲಿ 105 Active COVID Case ಗಳಲ್ಲಿ 93 ಬೆಂಗಳೂರು ನಗರದಲ್ಲಿ ಇದೆ.
ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್ ಸಿಕ್ವೆನ್ಸಿಂಗ್ ಮಾಡಲಾಗುತ್ತಿದೆ.
ಹಿಂದಿನ ಕೋವಿಡ್ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್, ವೆಂಟಿಲೇಟರ್, ಬೆಡ್ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್ ಲಭ್ಯತೆ,ಐಸಿಯು ಬೆಡ್ ಸಂಖ್ಯೆ ಜಾಸ್ತಿ ಮಾಡುವುದು ಪಿಪಿಇ ಕಿಟ್ ಗ್ಲೌಸ್,ಜನರಲ್ ವಾರ್ಡ್ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.ಕೋವಿಡ್ ನ ಸಮರ್ಪಕ ನಿರ್ವಹಣೆಯ ಹೊಣೆ ಈಗ ಎಲ್ಲರ ಮೇಲಿದೆ.ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು,ನಿರ್ಲಕ್ಷ್ಯ ಮಾಡದೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ.