ಚಾಮರಾಜನಗರ: ನೆರೆಯ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ಯತ್ನಿಸಲಾಗುತ್ತಿದ್ದು,
ಮಧುಮೇಹಿಗಳು ಖರ್ಜೂರವನ್ನು ತಿನ್ನಬಹುದಾ!? – ಇಲ್ಲಿದೆ ಉಪಯುಕ್ತ ಮಾಹಿತಿ
ಕೇರಳಕ್ಕೆ ಸನಿಹದಲ್ಲಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಿಲಾಗಿದೆ. ಮಾರಕ ಕೊರೊನಾ ವೈರಸ್ ಕೇರಳದ ಮೂಲಕ ಭಾರತಕ್ಕೂ ಕಾಲಿಟ್ಟಿದೆ. ಕೇರಳದಲ್ಲಿ ಕೊರೋನಾ ರೂಪಾಂತರ Jn1 ಪತ್ತೆ ಹಾಗೂ ಸೋಂಕಿಗೆ ಇಬ್ಬರು ಬಲಿ ಹಿನ್ನಲೆ ಕಟ್ಡೆಚ್ಚರ ವಹಿಸಲಾಗಿದೆ.