ನವದೆಹಲಿ: (WFI) ವ್ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾದ ನೂತನ ಅಧ್ಯಕ್ಷರಾಗಿ ಬ್ರಿಜ್ ಭೂಷನ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದಾರೆ.
ಈ ಹಿಂದೆ WFI ನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಂಜಯ್ ಸಿಂಗ್, ಚುನಾವಣೆಯಲ್ಲಿ 40 ಮತಗಳನ್ನು ಪಡೆದಿದ್ದಾರೆ, ಅವರ ವಿರುದ್ಧ ಸ್ಪರ್ಧಿಸಿದ್ದ ಅಭ್ಯರ್ಥಿಗೆ 7 ಮತಗಳು ಲಭಿಸಿದೆ. ಪ್ರೇಮ್ ಚಂದ್ ಲೋಚಬ್ ದರ್ಶನ್ ಲಾಲ್ ಅವರನ್ನು ಸೋಲಿಸಿದ್ದರಿಂದ CWG ಚಿನ್ನದ ಪದಕ ವಿಜೇತ ಸಮಿತಿಯು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಈ ಹಿಂದೆ ಬ್ರಿಜ್ ಭೂಷಣ್ ವಿರುದ್ದ ಅಂತರಾಷ್ಟ್ರೀಯ ಕುಸ್ತಿ ಪಟುಗಳ ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾಡಿದ್ದರು, ಈ ಆರೋಪವು ರಾಷ್ಟ್ರ ವ್ಯಾಪ್ತಿಯಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿತ್ತು. ಇದೀಗ WFI ನ ಣೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಜಯ್ ಸಿಂಗ್ ಆಯ್ಕೆಯಾಗಿದ್ದು ವಿಳಂಬವಾಗಿ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಸಿಂಗ್ ಪರೋಕ್ಷವಾಗಿ ಕ್ರೀಡಾ ಸಂಸ್ಥೆ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.