ಬಿಗ್ ಬಾಸ್ (Bigg Boss) ಮನೆಯಲ್ಲಿ ಏನೆಲ್ಲ ನಡೆಯುತ್ತವೆ. ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯಲ್ಲಿ ಗಂಡ ಹೆಂಡತಿ ಡಿವೋರ್ಸ್ (Divorce) ಬಗ್ಗೆ ಮಾತನಾಡಿದ ಘಟನೆ ನಡೆದಿದೆ. ಹಿಂದಿ ಬಿಗ್ ಬಾಸ್ ಮನೆಯಲ್ಲಿ ಕಿರುತೆರೆ ತಾರಾ ದಂಪತಿಯಾದ ವಿಕ್ಕಿ ಜೈನ್ ಮತ್ತು ಅಂಕಿತಾ ಲೋಖಂಡೆ (Ankita Lokhande)ಇದ್ದಾರೆ. ಅವರೇ ಇದೀಗ ಡಿವೋರ್ಸ್ ಕುರಿತು ಮಾತನಾಡಿದ್ದಾರೆ.
ಪ್ರೀತಿಸಿ ಮದುವೆ ಆಗಿರೋ ಈ ಜೋಡಿ ಬಿಗ್ ಬಾಸ್ ಮನೆಯಲ್ಲಿ ದಿನವೂ ಕಿತ್ತಾಡುತ್ತಲೇ ಇರುತ್ತಾರೆ. ಟಾಸ್ಕ್ ವಿಚಾರದಲ್ಲಂತೂ ಗಂಡ ಹೆಂಡತಿ ಅನ್ನೋದನ್ನೂ ಮರೆಯುತ್ತಾರೆ. ದಿನವೂ ಕಿರಿಕ್ ಮಾಡಿಕೊಂಡು ಜನರಿಗೆ ಮನರಂಜನೆ ನೀಡುತ್ತಿದ್ದಾರೆ. ಇದೀಗ ಡಿವೋರ್ಸ್ ವಿಚಾರ ಮಾತನಾಡಿ ಶಾಕ್ ಮೂಡಿಸಿದ್ದಾರೆ.
ಅಂಕಿತಾ ಲೋಖಂಡೆ ಈ ಹಿಂದೆ ಸುಶಾಂತ್ ಸಿಂಗ್ ರಜಪೂತ್ ಜೊತೆ ಡೇಟಿಂಗ್ ಮಾಡುತ್ತಿದ್ದರು. ಅದನ್ನು ಬ್ರೇಕ್ ಮಾಡಿಕೊಂಡು ವಿಕ್ಕಿ ಜೈನ್ ಜೊತೆ ಒಂದಾದರು. ಮದುವೆ ಮಾಡಿಕೊಂಡು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. ಈಗ ಅಲ್ಲಿಯೂ ಕಿತ್ತಾಡಿಕೊಂಡಿದ್ದಾರೆ. ಅಲ್ಲದೇ ಮೊನ್ನೆಯ ಸಂಚಿಕೆಯಲ್ಲಿ ವಿಕ್ಕಿ ಜೈನ್ ವಿವಾಹಿತರ ಕಷ್ಟಗಳ ಬಗ್ಗೆ ಮಾತಾಡುತ್ತಾರೆ. ಅಷ್ಟೊಂದು ಕಷ್ಟವಾದರೆ, ವಿಚ್ಛೇದನ ಪಡೆದುಕೊಳ್ಳೋಣ ಎಂದು ಹೇಳುವ ಮೂಲಕ ಶಾಕ್ ನೀಡಿದ್ದಾರೆ ಅಂಕಿತಾ.