ಚಾಮರಾಜನಗರ: ಬರದ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ ಎಂದು ಕೊಳ್ಳೇಗಾಲದಲ್ಲಿ ಸಚಿವ ಕೆ ವೆಂಕಟೇಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೊಳ್ಳೇಗಾಲ, ಯಳಂದೂರು, ಹನೂರು ನಾಳೆ ಗುಂಡ್ಲುಪೇಟೆಯಲ್ಲಿ ಅಧಿಕಾರಿಗಳೊಂದಿಗೆ ಸಭೆಯ ನಡೆಸುತ್ತೇನೆ.
ಕೋವಿಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲಾ ಗಡಿಗಳಲ್ಲೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯಂತೆ ಯಾವುದೇ ಅನಾಹುತ ಸಂಭವಿಸದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ತಮಿಳುನಾಡು, ಕೇರಳ ಗಡಿಯಲ್ಲಿ ತಪಾಸಣೆ ಕಡ್ಡಾಯ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.