ಹುಬ್ಬಳ್ಳಿ;ಹಳೇ ಹುಬ್ಬಳ್ಳಿಯ ಅಕ್ಕಿಪೇಟಯಲ್ಲಿ ಆಯೋಜಿಸಿದ ಮೋದಿ ಸರ್ಕಾರ ಗ್ಯಾರಂಟಿ ವಿಕಸಿತ ಭಾರತ ಯಾತ್ರೆಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ರವರು ಗಿಡಕ್ಕೆ ನೀರು ಉಣಿಸುವ ಮೂಲಕ ಕೇಂದ್ರ ಸರ್ಕಾರದ ಯೋಜನೆಯನ್ನು ವಿಡಿಯೋ ಮಾಹಿತಿ ನೀಡುವ ವಾಹನಕ್ಕೆ ಚಾಲನೆ ನೀಡಿದರು.
ಹಮ್ಮಿಕೊಂಡಿದ್ದ ಕೇಂದ್ರ ಸರಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರಾ ಚಾಲನೆ ನೀಡಿದ ನಂತರ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ ಹಾಗೂ 2047 ರ ಹೊತ್ತಿಗೆ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಬೃಹತ್ ಅಭಿಯಾನವನ್ನು ಆರಂಭಿಸಿದ್ದಾರೆ.
ಕೇಂದ್ರದ ಸರ್ಕಾರದ ಮುದ್ರಾಯೋಜನೆ, ಜನಧನ್ ಯೋಜನೆ, ಪಿ.ಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಕೃಷಿ ಸನ್ಮಾನ್ ಯೋಜನೆ, ಅನ್ನ ಭಾಗ್ಯ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿ ಎಲ್ಇಡಿ ಪರದೆಯ ವಾಹನಗಳ ಮೂಲಕ ಗ್ರಾಮ ಪಂಚಾಯತ ಹಾಗೂ ನಗರ ಪ್ರದೇಶದಲ್ಲಿ ಫಲನುಭವಿಗಳನ್ನು ತಲುಪುವ ನಿಟ್ಟಿನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ವಿಡಿಯೋ ಮಾಹಿತಿ ನೀಡುವ ವಾಹನ ದೇಶಾದ್ಯಂತ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು. ಮತ್ತು ಸ್ಥಳದಲ್ಲಿಯೇ ಯೋಜನೆ ಗಳ ಲಾಭಕ್ಕೆ ನೊಂದಾಯಿಸಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕೇಂದ್ರ ಸರ್ಕಾರದ 2024ರ ಕ್ಯಾಲೆಂಡರ್ ವೇದಿಕೆ ಮೇಲೆ ಉಪಸ್ಥಿತಿ ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಕುರಿತ ಕಿರುಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಪ್ರಭು ನವಲಗುಂದಮಠ, ಪಾಲಿಕೆ ಸದಸ್ಯರಾದ, ಸುಮಿತ್ರಾ ಗುಂಜಾಳ, ಬಸವರಾಜ ಚಿಕ್ಕಮಠ, ಲೋಕೇಶ್ ಗುಂಜಾಳ, ಮಂಜುನಾಥ ಕಾಟಕರ, ಎಚ್ ಎಸ್ ಕಿರಣ, ಪೂಜಾ ರಾಯ್ಕರ್, ಸ್ಟೇಟ್ ಬ್ಯಾಂಕ್ ಮ್ಯಾನೇಜರ್ ನೂರಾರು ಶಿಬಿರಾರ್ಥಿಗಳು ಹಾಗೂ ಯೋಜನೆಗಳ ಸಿಬ್ಬಂದಿಗಳು ಭಾಗವಹಿಸಿದ್ದರು.