ಹುಬ್ಬಳ್ಳಿ :- ಡಿ. 23, 24 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನ ನಡೆಯಲಿದೆ.
ಇದೇ ಡಿಸೆಂಬರ್ 23 ಮತ್ತು 24 ರಂದು ದಾವಣಗೆರೆಯಲ್ಲಿ ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ರಾಷ್ಟ್ರೀಯ ಮಹಾ ಅಧಿವೇಶನಕ್ಕೆ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿ ಮಹಾ ಅಧಿವೇಶನದ ಯಶಸ್ವಿಗೆ ತಮ್ಮ ಉಪಸ್ಥಿತಿ ಬಹಳ ಮಹತ್ವವಾದುದು.
ಎರಡು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಸಮ್ಮೇಳನದಲ್ಲಿ ಸಮಾಜದ ಸಮಸ್ಯೆಗಳ ಬೆಳಕ ಚೆಲ್ಲುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಹಕ್ಕುತ್ತಾಯ ಹಾಗೂ ಹಲವಾರು ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಪೋಷಕರು ಸಮಾಜದ ಮುಖಂಡರಾದ ಸದಾನಂದ ವಿ ಡಂಗನವರ ವಿನಂತಿ ಮಾಡಿಕೊಂಡಿದ್ದಾರೆ.