ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ (Siddara maiah) ಅವರ ಗ್ಯಾರಂಟಿ ಎಂದು ಸಿಎಂ ವಿರುದ್ಧ ಬಿಜೆಪಿ (BJP) ಎಕ್ಸ್ನಲ್ಲಿ ಕಿಡಿಕಾರಿದೆ. ಶಾಲೆ ಹಾಗೂ ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ.
Garlic: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಉತ್ತರ
ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಮುಖ್ಯಮಂತ್ರಿಗಳು ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪಿಎಫ್ಐ ಗೂಂಡಾಗಳು ಹಾಗೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟ್ವೀಟ್ನಲ್ಲಿ ಎಚ್ಚರಿಸಿದೆ.