ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊವಿಡ್ ಟೆನ್ಷನ್ ಶುರುವಾಗಿದೆ. ಇದರ ಬೆನ್ನಲ್ಲೇ ಹೊಸ ವರ್ಷ, ಕ್ರಿಸ್ಮಸ್ ಇದೆ. ಎಂ. ಜಿ. ರೋಡ್, ಬ್ರಿಗೇಡ್ ರೋಡ್’ನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧವಿಲ್ಲ. ಆದರೆ, ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ವರ್ಷದ ಬರ್ತಿದೆ. ಇಡೀ ರಾಜ್ಯದಲ್ಲಿ ಯುವಕರು ಆಚರಣೆ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಎಂ. ಜಿ. ರೋಡ್ , ಕಮರ್ಷಿಯಲ್ ಸ್ಟೀಟ್ನಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನ ಸೇರಿ ಸೆಲಬ್ರೇಷನ್ ಮಾಡ್ತಾರೆ. ಅನೇಕ ಸಂದರ್ಭಗಳಲ್ಲಿ ಕೆಲವು ಘಟನೆಗಳು ಸಹ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಅಬಕಾರಿ ಇಲಾಖೆ, ಮೆಟ್ರೋ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳೂ ಸೇರಿದಂತೆ ಎಲ್ಲರನ್ನೂ ಕರೆದು ಸಭೆ ಮಾಡಿದ್ದೇನೆ ಎಂದು ಪರಮೇಶ್ವರ್ ಹೇಳಿದರು.
Garlic: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಉತ್ತರ
ಯಾವುದೇ ರೀತಿಯಲ್ಲಿ ನಗರದಲ್ಲಿ ಅಹಿತಕರ ಘಟನೆಗಳು ನಡೆಯಬಾರದು. ಅದರ ಜೊತೆಗೆ ಕೋವಿಡ್ ಕೂಡಾ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಬಗ್ಗೆ ಸಭೆ ಕರೆದಿದ್ದೆವು. ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಎಜೆನ್ಸಿಗಳಿಗೆ ಸೂಚನೆ ನೀಡಿದ್ದೇನೆ. ಅವರವರ ಇಲಾಖೆಯಲ್ಲಿ ಏನೆಲ್ಲ ಮಾಡಬೇಕು ಅನ್ನೋದ್ರ ಬಗ್ಗೆ ಸೂಚನೆ ಕೊಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.