ಬೆಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವ ಇದೆಯಾ ಇಲ್ಲವೇ ಎಂದು ಪ್ರಶ್ನೆ ಮಾಡಬೇಕಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾತನಾಡಿದ ಅವರು, ಸಾಂಕೇತಿಕವಾಗಿ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಲೋಕಸಭೆ, ರಾಜ್ಯಸಭೆಯಲ್ಲಿ 140 ಕ್ಕೂ ಹೆಚ್ಚು ಸಂಸತ್ ಸದಸ್ಯರನ್ನು ಅಮಾನತು ಮಾಡಲಾಗಿದೆ.
Garlic: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಉತ್ತರ
ಸಂಸತ್ ದಾಳಿ ಮಾಡಿದ್ದಕ್ಕಾಗಿ ಉತ್ತರ ಕೊಡಿ ಎಂದು ಕೇಳಿದ್ದರು. ಇಷ್ಟು ಕೇಳಿದ್ದಕ್ಕೆ ಹೊಸ ಸಂಸತ್ ಭವನದಲ್ಲಿ ಇರುವ ಎಲ್ಲಾ ವಿಪಕ್ಷ ಸದಸ್ಯರನ್ನು ಅಮಾನತು ಮಾಡಲಾಗಿದೆ ಎಂದರು. ಕೇಂದ್ರದ ಪ್ರಜಾಪ್ರಭುತ್ವ ವಿರುದ್ಧ ನಿಲುವಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಸೋನಿಯಾ, ರಾಹುಲ್, ಖರ್ಗೆ ಬಿಟ್ಟರೆ ಎಲ್ಲಾ ಉಚ್ಛಾಟನೆ ಮಾಡಲಾಗಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.