ಡಿಸೆಂಬರ್ 26 ರಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಸೂಪರ್ ಸ್ಪೋರ್ಟ್ ಪಾರ್ಕ್ನಲ್ಲಿ ಮೊದಲನೇ ಟೆಸ್ಟ್ ಪಂದ್ಯ ನಡೆಯಲಿದೆ. ಡಿಸೆಂಬರ್ 19 ರಂದೇ ಕೊಹ್ಲಿ ತಂಡವನ್ನು ತೊರೆದಿದ್ದರು. ಡಿ. 22 ರಂದು ಭಾರತ ತಂಡವನ್ನು ಕೊಹ್ಲಿ ಕೂಡಿಕೊಳ್ಳಲಿದ್ದಾರೆಂದು ಕ್ರಿಕ್ಬಝ್ ವರದಿ ಮಾಡಿದೆ.
ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಅಂಗವಾಗಿ ಭಾರತ ತಂಡಕ್ಕೆ ಈ ಎರಡು ಪಂದ್ಯಗಳ ಟೆಸ್ಟ್ ಸರಣಿ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮೊದಲನೇ ಟೆಸ್ಟ್ಗೂ ಮುನ್ನ ದಕ್ಷಿಣ ಆಫ್ರಿಕಾಕ್ಕೆ ತೆರಳಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆಂಬ ಬಗ್ಗೆ ವಿಶ್ವಾಸವಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ಅವರು ಫೀಲ್ಡಿಂಗ್ ವೇಗಿ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಾರ್ಲ್ನಲ್ಲಿ ಗುರುವಾರ ನಡೆದಿದ್ದ ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯಕ್ಕೆ ಗಾಯಕ್ವಾಡ್ ಅಲಭ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಸ್ಥಾನದಲ್ಲಿ ರಜತ್ ಪಾಟಿದಾರ್ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಇದಕ್ಕೂ ಮುನ್ನ ಗಾಯಕ್ವಾಡ್ ಅವರು ಟಿ20 ಸರಣಿಗೂ ಅಲಭ್ಯರಾಗಿದ್ದರು. ಇದೀಗ ಟೆಸ್ಟ್ ಸರಣಿಗೂ ಮಿಸ್ ಆಗಲಿದ್ದಾರೆಂದು ಹೇಳಲಾಗುತ್ತಿದೆ.
“ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಋತುರಾಜ್ ಗಾಯಕ್ವಾಡ್ ಅವರ ಉಂಗುರ ಬೆರಳಿಗೆ ಗಾಯಕವಾಗಿತ್ತು. ಹಾಗಾಗಿ ಮೂರನೇ ಪಂದ್ಯದಲ್ಲಿ ಆಡಿಸದೆ, ಬಿಸಿಸಿಐ ವೈದ್ಯಕೀಯ ತಂಡದ ಕಣ್ಗಾವಲಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ,” ಎಂದು ಬಿಸಿಸಿಐ ಮೂರನೇ ಪಂದ್ಯದ ಟಾಸ್ ವೇಳೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.
ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಮೂರು ಬಾರಿ ಟೆಸ್ಟ್ ಸರಣಿ ಆಡಲು ದಕ್ಷಿಣ ಆಫ್ರಿಕಾಕಕ್ಕೆ ಪ್ರವಾಸ ಮಾಡಿದ್ದಾರೆ. 2021-22ರ ಸಾಲಿನಲ್ಲಿ ಕೊನೆಯ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿ ಆಡಿದ್ದರು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿಯವರ ನಾಯಕತ್ವ ಅಂತ್ಯವಾಗಿತ್ತು. ಅಂದ ಹಾಗೆ ದಕ್ಷಿಣ ಆಫ್ರಿಕಾದಲ್ಲಿ ವಿರಾಟ್ ಕೊಹ್ಲಿ51.36ರ ಸರಾಸರಿಯಲ್ಲಿ 719 ರನ್ಗಳನ್ನಯ ಗಳಿಸಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ.