ರಜನಿಕಾಂತ್ ವಿಶಿಷ್ಟ ಪಾತ್ರದಲ್ಲಿ ನಟಿಸಿರುವ ಲಾಲ್ ಸಲಾಂ (Lal Salaam) ಸಿನಿಮಾ ಜನವರಿ 14ರ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ದಿನಾಂಕವನ್ನು ಮುಂದೂಡಲು ಚಿತ್ರತಂಡ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಅಂದು ಅನೇಕ ಚಿತ್ರಗಳು ಬಿಡುಗಡೆ ಆಗುತ್ತಿರುವುದರಿಂದ ಇಂಥದ್ದೊಂದು ತೀರ್ಮಾನ ತಗೆದುಕೊಳ್ಳಲಾಗುತ್ತಿದೆ ಎನ್ನುವುದು ಸದ್ಯಕ್ಕಿರುವ ಮಾಹಿತಿ. ಆದರೆ, ಅಧಿಕೃತವಾಗಿ ಈವರೆಗೂ ಈ ಕುರಿತು ಚಿತ್ರತಂಡ ಹೇಳಿಕೊಂಡಿಲ್ಲ.
ಲಾಲ್ ಸಲಾಂ ರಜನಿಕಾಂತ್ ಮಗಳು ಐಶ್ವರ್ಯ ನಿರ್ದೇಶನದ ಸಿನಿಮಾ. ಈ ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡ್ತಿದ್ದಾರೆ ರಜನಿಕಾಂತ್. ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಕೂಡ ಆಗಿದ್ದು, ಅಚ್ಚರಿ ಎನ್ನುವಂತೆ ಅವರು ಕಾಣಿಸಿಕೊಂಡಿದ್ದಾರೆ.
ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಸಿನಿಮಾದ ಪೋಸ್ಟರ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.