ಗಾಂಧಿನಗರ: ಗುಜರಾತ್ನಲ್ಲಿ ಮದ್ಯ ಸೇವನೆ ಮತ್ತು ಮಾರಾಟಕ್ಕೆ ಅಲ್ಲಿನ ಸರ್ಕಾರ ಅವಕಾಶ ಕಲ್ಪಿಸಿದೆ. ಗುಜರಾತ್ ಸರ್ಕಾರವು ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ನಲ್ಲಿ ವೈನ್ ಮತ್ತು ಡೈನ್ (Wine and Dine) ನೀಡುವ ಹೋಟೆಲ್, ರೆಸ್ಟೋರೆಂಟ್ಸ್ ಹಾಗೂ ಕ್ಲಬ್ಗಳಲ್ಲಿ ಮದ್ಯ ಸೇವನೆಗೆ ಅನುಮತಿ ನೀಡಿದೆ.
ರಾಜಧಾನಿ ಗಾಂಧಿನಗರದ ಸಂಪೂರ್ಣ ಗಿಫ್ಟ್ ಸಿಟಿಯಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಾಗೂ ಮಾಲೀಕರಿಗೆ ಮದ್ಯ ಸೇವನೆ ಪರವಾನಗಿಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ
ಇದಲ್ಲದೇ, ಪ್ರತಿ ಕಂಪನಿಯ ಅಧಿಕೃತ ಸಂದರ್ಶಕರು ಆ ಕಂಪನಿಯ ಕಾಯಂ ಉದ್ಯೋಗಿಗಳ ಉಪಸ್ಥಿತಿಯಲ್ಲಿ ತಾತ್ಕಾಲಿಕ ಪರವಾನಗಿ ಹೊಂದಿರುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗಿದೆ
ಗಿಫ್ಟ್ ಸಿಟಿಯಲ್ಲಿರುವ ಅಥವಾ ಬರುವ ಹೋಟೆಲ್ಗಳು, ರೆಸ್ಟೋರೆಂಟ್ಗಳು ಅಥವಾ ಕ್ಲಬ್ಗಳು ಅಲ್ಲಿ ವೈನ್ ಮತ್ತು ಡೈನ್ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗಿಫ್ಟ್ ಸಿಟಿಯಲ್ಲಿ ಅಧಿಕೃತವಾಗಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳು ಮತ್ತು ಅಧಿಕೃತವಾಗಿ ಭೇಟಿ ನೀಡುವ ಸಂದರ್ಶಕರು ಹೋಟೆಲ್ಗಳು, ಕ್ಲಬ್, ರೆಸ್ಟೋರೆಂಟ್ಗಳಲ್ಲಿ ಮದ್ಯ ಸೇವಿಸಬಹುದು. ಆದ್ರೆ, ಇಲ್ಲಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.