ತಮಿಳುನಾಡು: ರಾಜ್ಯ ಮೈಚೌಂಗ್ ಚಂಡಮಾರುತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಭಾರೀ ಮಳೆಯಿಂದ ಬಹುತೇಕ ಗ್ರಾಮಗಳು ಮುಳುಗಡೆಯ ಜೊತೆಗೆ ಸಾವಿರಾರು ಎಕರೆ ಬೆಳೆಗಳಿಗೆ ಹಾನಿಯುಂಟಾಗಿದೆ. ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹ ದ ತೀವ್ರತೆ ಕಡಿಮೆಯಾಗಿದ್ದರೂ ಸಹ ಕೆಸರು ತುಂಬಿ ತೀವ್ರ ತೊಂದರೆಯಾಗುತ್ತಿದೆ.
ಇಂತಹ ಸನ್ನಿವೇಶಗಳ ನಡುವೆ ಕೇಂದ್ರ ಸರ್ಕಾರ ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಸ್ವತಹ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳಿದ್ದಾರೆ. ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಈ ಪರಿಸ್ಥಿತಿಯಲ್ಲಿ ರಾಜ್ಯವನ್ನು ಬೆಂಬಲಿಸಲು ಇಂದು ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಎನ್ಡಿಆರ್ಎಫ್ ಮತ್ತು ಹೆಲಿಕಾಪ್ಟರ್ ಸೇರಿದಂತೆ ಸಶಸ್ತ್ರ ಪಡೆಗಳ ನಿಯೋಜನೆಯ ಹೆಚ್ಚಿನ ಅಗತ್ಯತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ವಾರದ ಹಿಂದೆ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಸದ್ಯ ಪ್ರವಾಹ ಸಂತ್ರಸ್ತರಿಗೆ ಆಹಾರ, ಉತ್ತಮ ನೀರು ಪೂರೈಕೆ ಮಾಡಲಾಗುತ್ತಿದೆ.