ಬೆಂಗಳೂರು: ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ನಿರ್ಧಾರವನ್ನ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ಈ ನಿರ್ಧಾರವನ್ನ ಖಂಡಿಸುತ್ತೇನೆ. ಇದು ಶೋಭೆ ತರುವಂತಹದ್ದಲ್ಲ, ಅಧಿಕಾರ ಇದೆ ಅಂತ ರಾಜಕೀಯ ದೊಂಬರಾಟ ಮಾಡಲು ಹೊರಟಿದ್ದಾರೆ. ನೋಡೋಣ ಎಲ್ಲಿಯವರೆಗೆ ಇದೇ ರೀತಿ ಮಾಡ್ತಾರೆ ಅಂತ. ಬಿಜೆಪಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ವಿಚಾರ ಇಲ್ಲ, ಜನರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಶಾಲೆಗಳಲ್ಲಿ ಹಿಜಬ್ (Hijab) ನಿಷೇಧ ವಾಪಸ್ ಪಡೆಯಬೇಕೆಂಬ ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ. ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ ಅಗತ್ಯ. ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ. ಈಗಲೇ ಎಚ್ಚೆತ್ತು ತೀರ್ಮಾನ ವಾಪಸ್ ಪಡೆಯಬೇಕು ಎಂದು ಎಚ್ಚರಿಸಿದ್ದಾರೆ.