ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕುವ ಬದಲು ಕನ್ನಡಿಗರ ತಲೆಯ ಮೇಲೆ ಕಲ್ಲು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಏಳು ಕೋಟಿ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿರುವ ಸರ್ಕಾರ, ಅಭಿವೃದ್ಧಿ ಕಾಮಗಾರಿಗೆ ಒಂದು ಅಡಿಗಲ್ಲನ್ನೂ ಹಾಕಿಲ್ಲ. ಜನರು ಸರ್ಕಾರದ ಬಗ್ಗೆ ಛೀ, ಥೂ ಎಂದು ಮಾತನಾಡುತ್ತಿದ್ದಾರೆ. ಸರ್ಕಾರ ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರು ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರ ಎಂದು ಟೀಕಿಸಿದ್ದಾರೆ.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಬರ ಪರಿಹಾರಕ್ಕೆ ಇದೇ ವಾರದಲ್ಲಿ 2 ಸಾವಿರ ರೂ. ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ಹಣ ಸಿಕ್ಕಿಲ್ಲ. ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. 15-20 ಸಾವಿರ ರೂ.ಗೆ ಯಾರೂ ಬರದೆ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಈ ವಿಚಾರಗಳಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.