ಚನ್ನಪಟ್ಟಣ :- ಶಾಲಾ ಮಕ್ಕಳಲ್ಲಿ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮರೆತು ಹೋಗಿದ್ದ ಹಿಜಾಬ್ ಪ್ರಕರಣವನ್ನು ಮತ್ತೆ ಕೆದಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲಾ ಮಕ್ಕಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶದಿಂದ ಹಿಜಾಬ್ ವಿಚಾರವನ್ನು ಕಾಂಗ್ರೆಸ್ನವರು ಮತ್ತೆ ಮುನ್ನಲೆಗೆ ಎಳೆದು ತರುತ್ತಿದ್ದಾರೆ.
ಇದು ರಾಜ್ಯದ ಜನರಿಗೂ ಗೊತ್ತಿದೆ’ ಎಂದು ಭಾನುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದರು.
‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಿರಾ’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಸೂಕ್ತ ಸಂದರ್ಭದಲ್ಲಿ ಹೇಳುತ್ತೇನೆ ಎಂದು ಹೇಳಿದ್ದಾರೆ.