ಕಪ್ಪು ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ, ಶಾಶ್ವತವಾಗಿ ಬಿಳಿಕೂದಲು ಕಪ್ಪಾಗಿ ಉಳಿಯುತ್ತದೆ.
ಕಪ್ಪು ಒಣದ್ರಾಕ್ಷಿಗಳು ಅನೇಕ ವಿಧದ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಒಣದ್ರಾಕ್ಷಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಕಬ್ಬಿಣದ ಪ್ರಮಾಣವು ಕೂದಲು ಉದುರುವಿಕೆಯನ್ನು ತಡೆಯುತ್ತದೆ.
ಚಿಕ್ಕ ವಯಸ್ಸಿನಲ್ಲೇ ನಿಮ್ಮ ಕೂದಲು ಬಿಳಿಬಣ್ಣಕ್ಕೆ ತಿರುಗುತ್ತಿದ್ದರೆ, ಕಪ್ಪು ಒಣದ್ರಾಕ್ಷಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.
ಒಣದ್ರಾಕ್ಷಿ ಸೇವನೆಯಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಹೀಗಾಗಿ ಇದನ್ನು ನಿಯಮಿತವಾಗಿ ಸೇವಿಸಿದರೆ ಕೂದಲಿನ ಬೆಳವಣಿಗೆಯು ಉತ್ತಮಗೊಳ್ಳುತ್ತದೆ. ನಿಗದಿತ ಪ್ರಮಾಣದಲ್ಲಿ ಕಪ್ಪು ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಕೂದಲು ಹೊಳಪು ಮತ್ತು ಮೃದುವಾಗಿರುತ್ತದೆ.
ಕಪ್ಪು ಒಣದ್ರಾಕ್ಷಿ ವಿಟಮಿನ್ ಸಿ ಮತ್ತು ವಿಟಮಿನ್ ಇ ಅನ್ನು ಹೊಂದಿರುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. 20-15 ಗ್ರಾಂ ಕಪ್ಪು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೆನೆಸಿ, ಬೆಳಿಗ್ಗೆ ತಿನ್ನಿ.