ವಿಜಯಪುರ: ಯಡಿಯೂರಪ್ಪನಿಗೆ ಶಕುನಿ ಎಂದ ಹಾಗೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟ್ ನೀಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ. ಅದಕ್ಕೆ ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ತಕರಾರು ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು ಎಂದು ಹರಿಹಾಯ್ದರು
ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೇರೆ ಬೇರೆ ಹೇಳಿಕೆ ನೀಡಿ ಉಲ್ಟಾ ಹೊಡಿಯುತ್ತಿದ್ದಾರೆ. ಅವರ ಮಾತುಗಳಿಗೆ ನಾನು ಹೆದರುವುದಿಲ್ಲ ಎಂದು ಚಾಟಿ ಬೀಸಿದ್ದಾರೆ.