ಮೈಸೂರು:- ಯಾರ ಮುಲಾಜಿಗೂ ಒಳಗಾಗದೇ ಜಾತಿ ಗಣತಿ ರಿಲೀಸ್ ಮಾಡಲಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾರ ಮುಲಾಜಿಗೂ ಒಳಗಾಗದೇ ಜಾತಿ ಗಣತಿ ವರದಿಯನ್ನು ತ್ವರಿತವಾಗಿ ಸ್ವೀಕರಿಸಿ, ಬಿಡುಗಡೆ ಮಾಡಬೇಕು ಎಂದರು.
ಜಾತಿ ಗಣತಿ ವರದಿ ಬಿಡುಗಡೆಗೆ ವೀರಶೈವ ಲಿಂಗಾಯತ ಸಮುದಾಯ ಏಕೆ ವಿರೋಧ ಮಾಡುತ್ತಿದೆಯೋ ಗೊತ್ತಾಗುತ್ತಿಲ್ಲ. ಮೊದಲು ವರದಿಯನ್ನು ಸರ್ಕಾರ ಸ್ವೀಕರಿಸಿ, ಬಿಡುಗಡೆ ಮಾಡಲಿ. ಅದರಲ್ಲಿ ಏನಿದೆ ಎಂಬುದು ಚರ್ಚೆಯಾಗಲಿ. ವರದಿಯನ್ನೇ ನೋಡದೇ-ತಿಳಿಯದೇ ಸುಮ್ಮನೆ ಆರಂಭದಲ್ಲಿಯೇ ವಿರೋಧಿಸುವುದು ಸರಿಯಲ್ಲ’ ಎಂದರು.
ಇದೇ ರೀತಿ ಹಿಂದೆ ಹಾವನೂರು ಆಯೋಗದ ವರದಿಯನ್ನೂ ಸಾಕಷ್ಟು ವಿರೋಧಿಸಿದ್ದರು. ಆದರೆ, ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಎಲ್ಲರ ವಿರೋಧದ ನಡುವೆಯೂ ಹಾವನೂರು ವರದಿ ಬಿಡುಗಡೆ ಮಾಡಿದರು. ಈಗಿನ ಮುಖ್ಯಮಂತ್ರಿಯೂ ಅದೇ ರೀತಿ ಕ್ರಮ ಕೈಗೊಳ್ಳಬೇಕು. ಯಾರ ಮುಲಾಜಿಗೂ ಒಳಗಾಗಬಾರದು. ವರದಿಯ ಬಗ್ಗೆ ಅನಗತ್ಯವಾಗಿ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ’ ಎಂದು ಹೇಳಿದರು.