ಬೆಂಗಳೂರು:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಾಗುತ್ತಿದ್ದು, ಸಧ್ಯಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿಯು ಡಿಸೆಂಬರ್ 26ರಂದು ಸಭೆ ಸೇರಲಿದೆ ಎಂದರು.
ಜನರು ಜಾಗರೂಕರಾಗಿರಿ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದು ಬಿಟ್ಟರೆ ಸದ್ಯಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಈಗಿನಂತೆ ಯಾವುದೇ ನಿರ್ಬಂಧಗಳಿಲ್ಲ, ಅಂತಹ ಪರಿಸ್ಥಿತಿ ಇಲ್ಲ ಎಂದು ನಾನು ಭಾವಿಸುತ್ತೇನೆ. ಜೆಎನ್.1 ಉಪವಿಭಾಗವು ಎಲ್ಲೆಡೆ ಪ್ರಚಲಿತದಲ್ಲಿದ್ದರೂ ದೇಶ ಅಥವಾ ಜಗತ್ತಿನಲ್ಲಿ ಎಲ್ಲಿಯೂ ಯಾವುದೇ ನಿರ್ಬಂಧವಿಲ್ಲ. ಅಂತಹ ಯಾವುದೇ ನಿರ್ಬಂಧಗಳಿಲ್ಲ ಎಂದು ಅವರು ಹೇಳಿದರು.