ಬೆಂಗಳೂರು:– ಐದನೇ ಗ್ಯಾರಂಟಿ ಯುವ ನಿಧಿ ಜಾರಿಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬೆಳಗ್ಗೆ 11ಗಂಟೆಗೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಪದವೀಧರರಿಗೆ ಮಾಸಿಕ 3000 ರೂಪಾಯಿ ಮತ್ತು ಡಿಪ್ಲೋಮಾ ಹೋಲ್ಡರ್ಸ್ ಗೆ ಮಾಸಿಕ 1500 ರೂ ನಿರುದ್ಯೋಗ ಭತ್ಯೆಯನ್ನು ಫಲಾನುಭವಿಗಳಿಗೆ ಎರಡು ವರ್ಷದವರೆಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.
ಯುವನಿಧಿ ಯೋಜನೆಯ ಫಲಾನುಭವಿಗಳು 2022-23 ರಲ್ಲಿ ವ್ಯಾಸಾಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳ ಕಾಲ ವ್ಯಾಸಾಂಗ ಮಾಡಿರಬೇಕು. ಸ್ವಯಂ ಉದ್ಯೋಗಿಗಳಾಗಿದ್ರೆ ನಿರುದ್ಯೋಗ ಭತ್ಯೆ ಇಲ್ಲ. ಸರ್ಕಾರಿ, ಅನುದಾನಿತ, ಖಾಸಗಿ ನೌಕರರಾಗಿದ್ರೆ ಯೋಜನೆಗೆ ಅರ್ಹರಲ್ಲ.
ಅರ್ಜಿ ಸಲ್ಲಿಕೆ ಹೇಗೆ?
ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರ ಮತ್ತು ಸೇವಾ ಸಿಂಧು ಜಾಲತಾಣದಲ್ಲಿಯೂ ಅರ್ಜಿ ಸಲ್ಲಿಕೆ ಮಾಡಬಹುದು.
ಯಾವೆಲ್ಲಾ ದಾಖಲೆಗಳು ಬೇಕು?
ಅಭ್ಯರ್ಥಿಗಳು ಕರ್ನಾಟಕ ರಹವಾಸಿ ಎಂದು ನಿರೂಪಿಸಬೇಕು. ಪೋರ್ಟಲ್ ನಲ್ಲಿ ಸಂಬಂಧಿಸಿದ ಎಲ್ಲಾ ದಾಖಲೆ ಸಲ್ಲಿಸಬೇಕು. ಎಸ್ಎಸ್ಎಲ್ಸಿ, ಪಿಯುಸಿ ಅಂಕಪಟ್ಟಿ, ಸಿಇಟಿ ಸಂಖ್ಯೆ, ರೇಷನ್ ಕಾರ್ಡ್, ಪದವಿ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ ಸಲ್ಲಿಸಬೇಕು.