ಹುಬ್ಬಳ್ಳಿ:- ಸಿದ್ದರಾಮಯ್ಯರನ್ನು ಮೂರ್ಖ ಎಂದುಕೊಂಡವರು ಮೂರ್ಖರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗ್ದರಲ್ಲ, ಧೂರ್ತ. ಹಿಜಾಬ್ ನಿಷೇಧವೇ ಆಗಿಲ್ಲ, ಹೀಗಿರುವಾಗ ಹಿಜಾಬ್ ಬ್ಯಾನ್ ಹಿಂಪಡೆಯುತ್ತೇವೆ ಅಂದರೆ ಅದಕ್ಕೆ ಅರ್ಥವಿಲ್ಲ. ಸಮವಸ್ತ್ರ ಸಂಹಿತೆ ಬಿಟ್ಟು ಹಿಜಾಬ್ ಧರಿಸಲು ಅವಕಾಶ ಕೊಡುತ್ತೇವೆ ಎಂದು ಹೇಳಿದರೆ, ಆಗ ಇನ್ನೊಬ್ಬರು ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುತ್ತಾರೆ.
ಸಿದ್ದರಾಮಯ್ಯನವರೇ ನೀವು ರಾಜ್ಯವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ತರಹ ಹೇಳಿಕೆ ಕೊಡುತ್ತಿದ್ದಿರೋ? ಸಮಾಜ ಒಡೆದು ವೋಟ್ ತಗೆದುಕೊಳ್ಳಬೇಕು ಎನ್ನುವುದು ನಿಮ್ಮ ಉದ್ದೇಶ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರ ಅಧಿಕಾರದಲ್ಲಿದೆ. ಇದು ನಿಮ್ಮ ಸ್ಥಿತಿ. ಇನ್ನು ನೀವು ಹೀಗೇ ಹುಚ್ಚು ಹುಚ್ಚಾಗಿ ಮಾತನಾಡಿದ್ರೆ, ಜನ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಸೇರಿಸುತ್ತಾರೆ ನೆನಪಿಟ್ಟುಕೊಳ್ಳಿ ಎಂದು ಕಿಡಿಕಾರಿದರು.