ಶಿರಸಿ:- ಲೋಕಸಭಾ ಚುನಾವಣೆಗೆ ಮತ್ತೆ ನಾನೇ ಸ್ಪರ್ಧಿಸಿದರೆ ಆ ಭಗವಂತ ಒಪ್ಪಲ್ಲ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಕಾರ್ಯಕರ್ತರು ಮಂಗಳವಾರ ಅವರ ಮನೆಗೆ ತೆರಳಿ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ಸೂಚಿಸದಿದ್ದರೆ ನಾವು ಸ್ಥಳದಲ್ಲೇ ಉಪವಾಸ ಕೂರುತ್ತೇವೆ ಎಂದು ಪಟ್ಟುಹಿಡಿದರು.
ಆದರೆ ಅನಂತ ಕುಮಾರ್ ಮಾತ್ರ ಇನ್ನೂ ಸ್ಪರ್ಧಿಸಿದರೆ ಭಗವಂತ ಒಪ್ಪುವುದಿಲ್ಲ. ನಿಮ್ಮ ಪ್ರೀತಿ, ವಿಶ್ವಾಸ ತಿರಸ್ಕರಿಸುವಂಥ ಮೂರ್ಖತನವನ್ನು ಭಗವಂತ ನನಗೆ ನೀಡದಿರಲಿ ಎಂದು ಮಾರ್ಮಿಕವಾಗಿ ನುಡಿದರು.
ಆರು ಬಾರಿ ನನ್ನನ್ನು ಗೆಲ್ಲಿಸಿದ್ದೀರಿ, ನನಗೆ ಇನ್ನೇನು ಬೇಕು? ರಾಜಕೀಯದಿಂದ ದೂರ ಆಗಬೇಕು ಎಂದು ಕಳೆದ ಮೂರು ಅವಧಿಯಿಂದ ಹೇಳಿಕೊಂಡು ಬಂದಿದ್ದೇನೆ. ಜನ ನನ್ನನ್ನು ತಿರಸ್ಕರಿಸಿ ಹೊಸಬರ ಹೆಸರು ಹೇಳಲಿ ಎಂದು ಮೂರು ವರ್ಷಗಳಿಂದ ಸಾರ್ವಜನಿಕರ ಭೇಟಿ ಸಹ ಮಾಡಿರಲಿಲ್ಲ. ನಾನೇ ಮತ್ತೆ ಮತ್ತೆ ಸ್ಪರ್ಧೆ ಮಾಡುವುದನ್ನು ಭಗವಂತನೂ ಒಪ್ಪುವುದಿಲ್ಲ. ಜಿಲ್ಲೆಯಲ್ಲಿ ಸಾಮರ್ಥ್ಯ ಉಳ್ಳವರು, ಆಕಾಂಕ್ಷಿತರು ಜಾಸ್ತಿ ಇದ್ದಾರೆ. ಅವರಿಗೂ ಅವಕಾಶ ಸಿಗಬೇಕು ಎಂದರು.