ಹುಬ್ಬಳ್ಳಿ; ಭಾರತೀಯ ಜನತಾ ಪಕ್ಷದ ಅಧಿಕಾರದ ಅವಧಿಯಲ್ಲಿ ಕೋವೀಡ್ ನಲ್ಲಿ ೪ ಸಾವಿರ ಕೋಟಿ ಭ್ರಷ್ಟಾಚಾರ ಕುರಿತು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರೇ ಸ್ಪಷ್ಟಪಡಿಸಿದ್ದು ಅವರದೇ ಕೇಂದ್ರ ನಾಯಕರರು ಈ ಬಗ್ಗೆ ಮಾತಾಡತಾ ಇಲ್ಲ ಅವರಿಗೂ ಪಾಲು ಇರಬಹುದು ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದರು
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಬಿಜೆಪಿ 40% ಕಮಿಷನ್ ಸರ್ಕಾರವೆಂಬ ಆರೋಪಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ . ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು 4,000 ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಇನ್ನು ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ಆಗಿರಬಹುದು.
ಕೋವಿಡ್ ರೋಗದ ನಿವಾರಣೆ ಮತ್ತು ತಡೆಗಟ್ಟುವಿಕೆಯ ಹೆಸರಿನಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ತನಿಖೆ ಮಾಡತಾ ಇದೆ.
ಈ ಎರಡೂ ಇಲಾಖೆಗಳು ಕೋವಿಡ್ ನಿರ್ವಹಣೆಗಾಗಿ ಔಷಧಿ ಹಾಗೂ ಉಪಕರಣಗಳ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು (ಪಿಎಸಿ) ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ವಿವರಿಸಲಾಗಿದೆ. ಹೀಗಾಗಿ, ಈ ಪ್ರಕರಣದ ತನಿಖೆ ಈಗಾಗಲೇ ನಡೆದಿದು ಔಷಧ , ಪೀಠೋಪಕರಣ ಸೇರಿದಂತೆ ಅನೇಕ ಆಯಾಮಗಳಲ್ಲಿ ನಡೆದಿದೆ. ಸ್ವಲ್ಪ ಸಮಯ ಬೇಕು ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎನ್ನಲಾಗಿತ್ತು ಆದರೆ ಭ್ರಷ್ಟಾಚಾರ ದೊಡ್ಡ ಪ್ರಮಾಣದಲ್ಲಿ ಆಗಿದೆ ಸಮಯ ಬೇಕುಈ ನಿಟ್ಟಿನಲ್ಲಿ ಸಮಗ್ರ ಮಾಹಿತಿ, ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಸಲ್ಲಿಸಬೇಕಾಗಿದೆ ಎಂದರು.
ಇನ್ನು ಆರು ತಿಂಗಳಲ್ಲಿ ರಾಜ್ಯ ಸರ್ಕಾರ ಬಿದ್ದು ಹೋಗುತ್ತದೆ ಎಂಬ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಹೇಳಿಕೆನಿರಾಣಿ ಯಾರು ಈಗ ಏನು ಇದ್ದಾರೆ ಎಂದರು. ಇನ್ನು ಐದು ಗ್ಯಾರಂಟಿಗಳಿಂದ ಹೆರಿಗೆ ಹೆಚ್ಚಳ ಆಗುವ ಕುರಿತು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿಕೆಗೆ ಸ್ಪಷ್ಟತೆ ನೀಡಿದ ಅವರು ಅದು ಜನಸಾಮಾನ್ಯರಿಗೆ ಹೊರೆ ಆಗಲ್ಲ ಎಂದರು