ಮೈಸೂರು: ಪ್ರತಾಪ್ಸಿಂಹಗೂ ಮನೋರಂಜನ್ಗೂ ಏನು ಸಂಬಂಧ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ಸಿಂಹ ಹಾಗೂ ಮನೋರಂಜನ್ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನಿಸಿದರು. ಸಂಸದ ಪ್ರತಾಪ್ಸಿಂಹ ಅವರು ಲೋಕಸಭೆ ಭದ್ರತೆ ವಿಚಾರವಾಗಿ ಕೇಳಿದರೆ ತಾಯಿ ಚಾಮುಂಡೇಶ್ವರಿ ಎಲ್ಲ ನೋಡಿಕೊಳ್ಳುತ್ತಾಳೆ. ನಾನು ದೇಶ ಭಕ್ತನೋ ಇಲ್ಲವೋ ಎಂದು ಜನರು ಚುನಾವಣೆಯಲ್ಲಿ ನಿರ್ಧರಿಸುತ್ತಾರೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್ಗೂ ನಿಮಗೂ ಸಂಪರ್ಕ ಇಲ್ಲವೇ? ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ವಾಗ್ದಾಳಿ ನಡೆಸಿದರು.