ಆನೆಯನ್ನ ಪಳಗಿಸೋಕೆ ಒಬ್ಬ ಮಾವುತ ಬೇಕು ಅಂತ ಆ್ಯಡ್ ನೋಡಿದೆ. ಹಾಗಾಗಿ ಬಂದೆ. ಇದು ಅಸ್ತಿಕ್ ಅವಿನಾಶ್ ಶೆಟ್ಟಿ (Avinash Shetty) ವೈಲ್ಡ್ ಕಾರ್ಡ್ (Wild Card) ಮೂಲಕ ಈ ಸಲದ ಬಿಗ್ ಬಾಸ್ ಮನೆಯೊಳಗೆ (Bigg Boss Kannada 10) ಹೋದಾಗ ಆಡಿದ ಮಾತು. ಅವರ ಸ್ಟೈಲ್, ಕಾನ್ಫಿಡೆನ್ಸ್, ಮಾತು ಎಲ್ಲವೂ ಅವರು ಮನೆಯೊಳಗೆ ಮಿಂಚಲಿದ್ದಾರೆ ಎಂಬುದನ್ನು ದೃಢೀಕರಿಸುವ ಹಾಗೆಯೇ ಇತ್ತು. ಆದರೆ ಅವಿನಾಶ್ ಪ್ರೇಕ್ಷಕರ ನಿರೀಕ್ಷೆಯ ಮಟ್ಟಕ್ಕೆ ಮುಟ್ಟಲು ಸಾಧ್ಯಾಗಿಲ್ಲ. ಹಾಗಾಗಿಯೇ ಈ ವಾರ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. ಬ್ಯಾಕ್ ಟು ಬ್ಯಾಕ್ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಯಿಂದ ಹೊರಗೆ ಬರುವುದರ ಮೂಲಕ, ಅರ್ಧದಲ್ಲಿ ಎಂಟ್ರಿ ಕೊಟ್ಟು ಮನೆಯೊಳಗೆ ಜಾಗ ಗಿಟ್ಟಿಸುವುದು ಸುಲಭದ ಮಾತಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ.
ಮೈಕಲ್- ಅವಿನಾಶ್ ಭಾನುವಾರದ ಸಂಚಿಕೆಯ ಕೊನೆಯಲ್ಲಿ ಕಾರಿನಲ್ಲಿ ಕೂತು ಮನೆಯಿಂದ ಹೊರಗೆ ಹೋದಾಗ, ಈ ವಾರ ಡಬಲ್ ಎಲಿಮಿನೇಷನ್ ಆಗಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈ ನಿರೀಕ್ಷೆ ಸುಳ್ಳಾಗಿ ಬಿಗ್ಬಾಸ್ ಸೋಮವಾರದ ಸಂಚಿಕೆಯಲ್ಲಿ ಹೊಸದೊಂದು ಟ್ವಿಸ್ಟ್ ನೀಡಿದ್ದಾರೆ. ಮೈಕಲ್ ಮತ್ತೆ ಮನೆಯೊಳಗೆ ಬಂದಿದ್ದಾರೆ. ಅವಿನಾಶ್ ಒಬ್ಬರೇ ಎಲಿಮಿನೇಟ್ ಆಗಿದ್ದಾರೆ. ಮನೆಯಿಂದ ಹೊರಗೆ ಬಂದಿರುವ ಅವಿನಾಶ್ ಶೆಟ್ಟಿ, ಜಿಯೋ ಸಿನಿಮಾಗೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ಮನೆಯೊಳಗಿನ ಜರ್ನಿಯ ಬಗ್ಗೆ ಮುಕ್ತವಾಗಿ ಅವಿನಾಶ್ ಮಾತಾಡಿದ್ದಾರೆ.
ಎಲ್ಲರಿಗೂ ನಮಸ್ಕಾರ, ನಾನು ಅಸ್ತಿಕ್ ಅವಿನಾಶ್ ಶೆಟ್ಟಿ. ಈಗ ತಾನೆ ಬಿಗ್ಬಾಸ್ ಮನೆಯಿಂದ ಹೊರಗೆ ಬಂದಿದ್ದೀನಿ. ತುಂಬಾನೇ ಫೀಲಿಂಗ್ಸ್ ಇವೆ. ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್ ಆಗಿ ನಾಲ್ಕು ವಾರ ಇದ್ದೆ. ನನ್ನ ಬೆಸ್ಟ್ ಕೊಡಲು ಟ್ರೈ ಮಾಡಿದೆ. ಫಿನಾಲೆಯ ಸಮೀಪಕ್ಕೆ ಹೋಗಿ ಹೊರಗೆ ಬಂದಿದ್ದೀನಿ. ಹಾಗಾಗಿ ಸ್ವಲ್ಪ ದುಃಖ ಆಗ್ತಿದೆ. ನಾನು ನಿರೀಕ್ಷೆ ಮಾಡಿರಲಿಲ್ಲ. ಸೇವ್ ಆಗ್ತೀನಿ ಅಂತಾನೇ ಅಂದ್ಕೊಂಡಿದ್ದೆ. ಆದರೆ ಹಣೆಬರಹ ಏನೂ ಮಾಡಕ್ಕಾಗಲ್ಲ.
ನನ್ನ ಮೇಲೆ ನಿರೀಕ್ಷೆಯ ಹೆಚ್ಚಿತ್ತು:
ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್ ಅಂದ ಕೂಡಲೇ ನಿರೀಕ್ಷೆ ಹೆಚ್ಚಿಗೆಯೇ ಇರುತ್ತದೆ. ಆ ನಿರೀಕ್ಷೆಯನ್ನು ಪೂರೈಸುವ ಹಾದಿಯಲ್ಲಿಯೇ ನಾನಿದ್ದೆ ಕೂಡ. ಒಂದು ವಾರ ಗ್ರೇಸ್ ಟೈಮ್ ಕೂಡ ಇತ್ತು. ನಾನು ಹೋದ ಮೊದಲ ವಾರ ಎಲಿಮಿನೇಷನ್ ಇರಲಿಲ್ಲ. ಆದರೆ ಅದನ್ನು ನಾನು ಸದುಪಯೋಗಪಡಿಸಿಕೊಳ್ಳುವಲ್ಲಿ ಎಡವಿದೆ ಅನಿಸುತ್ತದೆ. ಆದರೆ ಗೇಮ್ನಲ್ಲಿ ನನ್ನತನವನ್ನು ಬಿಟ್ಟುಕೊಡಲಿಲ್ಲ. ನಾನು ಒಳಗೆ ಹೋದಾಗ ವಿನಯ್, ತನಿಷಾ, ಕಾರ್ತಿಕ್ ಎಲ್ಲರ ಬಗ್ಗೆಯೂ ಕೆಲವು ಪೂರ್ವನಿರ್ಧರಿತ ಅಭಿಪ್ರಾಯಗಳಿದ್ದವು. ಎಲ್ಲರಿಗಿಂತ ಕಡಿಮೆ ಪರಿಚಯ ಇದ್ದಿದ್ದು ವರ್ತೂರ್ ಸಂತೋಷ್ (Varthur Santhosh) ಮತ್ತು ತುಕಾಲಿ ಸಂತೂ ಅವರ ವ್ಯಕ್ತಿತ್ವ.