ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನ ದಾವಣಗೆರೆ ಜಿಲ್ಲೆ ಸಂತೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ನಲ್ಲೂರಿನ ಸೈಯದ್ ಖಾದೀರ್, ಇಸ್ಮಾಯಿಲ್ ಜಬಿ, ಪ್ರಜ್ವಲ್ ಬಂಧಿತ ಆರೋಪಿಗಳಾಗಿದ್ದು, ಸಂತೆಬೆನ್ನೂರ-ಚನ್ನಗಿರಿ ರಸ್ತೆಯ ಪುಷ್ಕರಣಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 543 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಘಟನೆ ಸಂಬಂಧ ದಾವಣಗೆರೆ ಜಿಲ್ಲೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುಲಾಗಿದೆ.