ಗದಗ: ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳು ಸಿಗಬೇಕು. ಆದರೆ ನಾಲ್ಕು ಗೋಡೆಗಳ ಮಧ್ಯೆ ನಡೆದ ಜಾತಿ ಜನಗಣತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಜಾತಿ ಜನಗಣತಿ ಸ್ವೀಕಾರಕ್ಕೆ ಪಕ್ಷಾತೀತವಾಗಿ ಲಿಂಗಾಯತ ಶಾಸಕರ ವಿರೋಧವಿದೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ್ ಹೇಳಿದರು. ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕೇವಲ ಲಿಂಗಾಯತ ಸಮುದಾಯವನ್ನು ಗುರಿಯಾಗಿಸಿಕೊಂಡು ವರದಿ ಸಿದ್ಧಪಡಿಸಲಾಗಿದೆ. ಕಾಂಗ್ರೆಸ್ಸಿನ ಶಾಮನೂರ ಶಿವಶಂಕರಪ್ಪ ಅವರೇ ಜಾತಿ ಜನಗಣತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅರವಿಂದ ಬೆಲ್ಲದ ಸಹಿತ ಅನೇಕ ಲಿಂಗಾಯತ ಶಾಸಕರು ನಾಲ್ಕು ಗೋಡೆಗಳ ಮಧ್ಯೆ ತಯಾರಾದ ವರದಿ ಜಾರಿಯಾಗುವುದು ಬೇಡ ಎಂದಿದ್ದಾರೆ. ಈ ಬಗ್ಗೆ ಸಚಿವ ವಿನಯ ಕುಲಕರ್ಣಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದರು.
ದಿಗಂತ್’ಗೆ ಕಿಚ್ಚ ಸಾಥ್..! ”ಎಡಗೈ ಅಪಘಾತಕ್ಕೆ ಕಾರಣ” ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಸುದೀಪ್
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಪರಾಭವಗೊಂಡ ಕ್ಷೇತ್ರಗಳಲ್ಲಿ ಈಗ ಇಬ್ಬರು ಶಾಸಕರು ಕಾರ್ಯಭಾರ ನಡೆಸುತ್ತಿದ್ದಾರೆ. ಅದರಲ್ಲೂ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳು ಸೂಪರ್ ಎಂಎಲ್ಎ ರೀತಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸಹ ಮೊದಲಿನಂತಿಲ್ಲ. ಯಾವುದೊ ಒತ್ತಡದಲ್ಲಿ ಇರುವಂತೆ ಕಾಣುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದರು.