ಶಿರಸಿ: ನೂತನ ರಾಮಮಂದಿರ ಹಿಂದೂ ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆಗುರುತು. ಹಿಜಾಬ್ ಹಿಂದೆ ತಿರುಗುವ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೊದಲಿನಿಂದಲೂ ಬಹುಸಂಖ್ಯಾತರ ಪರವಾಗಿಲ್ಲ. ಕೇವಲ ಓಲೈಕೆ ರಾಜಕಾರಣದಲ್ಲಿ ನಿಸ್ಸೀಮವಾಗಿರುವ ಕಾಂಗ್ರೆಸ್’ಗೆ ಅಲ್ಪ ಸಂಖ್ಯಾತರ ಮತವಿಲ್ಲದೇ ಬದುಕಲು ಸಾಧ್ಯವಿಲ್ಲ ಎಂಬ ಸ್ಥಿತಿ ಇದೆ.
ಯಾರು, ಯಾವುದೇ ರೀತಿಯ ಬಟ್ಟೆ ಹಾಕಿಕೊಳ್ಳಬಹುದು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಭವಿಷ್ಯದಲ್ಲಿ ಹಲವು ಸಮಸ್ಯೆಗಳಿಗೆ ಎಡೆ ಮಾಡಿಕೊಡಲಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಈ ರಾಜ್ಯದ ಜನತೆ ತೆಗೆದಿಟ್ಟ ವ್ಯಕ್ತಿ ಟಿಪ್ಪುವಿನ ಹೆಸರನ್ನು ಬಳಸಿ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಕಳೆದ ವಿಧಾನಸಭೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅನಂತ್, ರಾಜಕೀಯದಲ್ಲಿ ಏಳು-ಬೀಳು ಸ್ವಾಭಾವಿಕ. ಮುಂದಿನ ದಿನದಲ್ಲಿ ಬಿಜೆಪಿಗೆ ಉತ್ತಮ ಭವಿಷ್ಯವಿದ್ದು, ದುರಂಹಕಾರಿ ಸಿದ್ದರಾಮಯ್ಯ ಸರ್ಕಾರ ಹೆಚ್ಚಿನ ದಿನ ಉಳಿಯುವುದಿಲ್ಲ.
ದಿಗಂತ್’ಗೆ ಕಿಚ್ಚ ಸಾಥ್..! ”ಎಡಗೈ ಅಪಘಾತಕ್ಕೆ ಕಾರಣ” ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಸುದೀಪ್
ಹಿಂದೂ ವಿರೋಧಿ ಸರ್ಕಾರ ಕರ್ನಾಟಕದಲ್ಲಿ ಎಂದಿಗೂ ಉಳಿಯಲಾರದು. ಆರ್ಥಿಕ ಸುಭದ್ರತೆಯ ಕಲ್ಪನೆಯೇ ಇಲ್ಲದೇ ಇದ್ದವರು ಈ ಉಚಿತ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಜನಕ್ಕೂ ಇದು ಬೇಕಾಗಿಲ್ಲ. ಅವರ ಮೇಲೆ ಈ ಉಚಿತವನ್ನು ಹೇರಿದ್ದರಿಂದ ಅಭಿವೃದ್ಧಿಗೆ ಹಣವಿಲ್ಲದಂತಾಗಿದೆ. ಈ ಸರ್ಕಾರ ಕೈಗೊಂಡಿರುವ ಅನೇಕ ಅಭಿವೃದ್ಧಿ ಯೋಜನೆಗಳೇ ಕುಂಠಿತವಾಗುತ್ತಿದೆ. ಸಾಮಾಜಿಕ ಹೊಣೆಗಾರಿಕೆ ಅರ್ಥ ಮಾಡಿಕೊಂಡು ಉಚಿತ ಕೊಡುಗೆ ನೀಡಬೇಕು. ಸಾಲ ತಂದು ಉಚಿತ ನೀಡುವ ಈಗಿನ ಸರ್ಕಾರ ಹುಚ್ಚು ಸರ್ಕಾರ ಎಂದು ಜರಿದರು.