ಗದಗ: ರಾಜ್ಯದಲ್ಲಿ ಕೋವಿಡ್-19 ಜೆಎನ್ 1 ಪ್ರಕರಣಗಳು ಹೆಚ್ಚಾಗ್ತಿರೋ ಹಿನ್ನೆಲೆಯಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ನಿರ್ವಹಣೆಗಾಗಿ ಮಾಡಿಕೊಳ್ಳಲಾದ ವ್ಯವಸ್ಥೆಯನ್ನು ಪರಿಶೀಲಿಸಿದ್ರು. ನಂತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಕೋವಿಡ್ ನಿರ್ವಹಣೆಗೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆಯನ್ನ ನೀಡಿದ್ರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಜಿಮ್ಸ್ ನಿರ್ದೆಶಕ ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಡಾ.ಎಸ್.ಎಸ್.ನೀಲಗುಂದ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.