ಬಳ್ಳಾರಿ: ಇಂದು ಬಳ್ಳಾರಿ ಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಅವರು ಮಾತನಾಡಿ ಈಗಾಗಲೇ ತಮ್ಮ ಸೂಕ್ತ ಗಮನದಲ್ಲಿರುವಂತೆ, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ. ಘನ ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು.
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರು ರವಿಕಿರಣ್.ಜೆ.ಪಿ, ಉಪಾಧ್ಯಕ್ಷರು ಕೆ. ಈರಣ್ಣ, ಖಜಾಂಚಿ ಎಂ.ಶಾಂತಿ, ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರು ನಿಹಾರಿಕ, ಪ್ರಮೋದ್ ಮತ್ತು ಸದಸ್ಯರು ಸತೀಶ್, ರಾಮಾಂಜಿನಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.