ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿರುವ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ಘಟನೆ.
ಪುಷ್ಪ (51) ಬಿಎಂಟಿಸಿಗೆ ಬಲಿಯಾದ ಮಹಿಳೆಯಾಗಿದ್ದು ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ. ಕೂಡಲೇ ಪುಷ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ.
ಬಸ್ ಚಾಲಕ ನಾಗರಾಜ್ನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.