ಜಮ್ಮು ಮತ್ತು ಕಾಶ್ಮೀರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹತ್ತಿಕ್ಕುವಲ್ಲಿ ಭಾರತೀಯ ಸೇನೆ ಯಶಸ್ವಿ ಆಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಗಡಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಯೋಧರ ಧೈರ್ಯ ಹಾಗೂ ಸಾಹಸವನ್ನು ಕೊಂಡಾಡಿದರು.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಭಾರತೀಯ ಸೇನೆಯ ಯೋಧರ ಧೈರ್ಯ ಹಾಗೂ ದೃಢತೆ ಬಗ್ಗೆ ನನಗೆ ನಂಬಿಕೆ ಇದೆ ಎಂದು ಹೇಳಿದ ರಾಜನಾಥ್ ಸಿಂಗ್, ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾನೆಯಿಂದ ಮುಕ್ತ ಆಗಬೇಕು. ಇದಕ್ಕಾಗಿ ನಾವು ದೃಢ ಸಂಕಲ್ಪ ಮಾಡಿದ್ದೇವೆ. ಈ ಸಂಕಲ್ಪದ ಸಾಕಾರ ಆಗಬೇಕು. ನಮ್ಮ ಯೋಧರು ಉಗ್ರವಾದವನ್ನು ಮೆಟ್ಟಿ ನಿಲ್ಲುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.