ಕೋಲ್ಕತಾ: ಜನವರಿ 22ರಂದು ನಡೆಯಲಿರುವ ಅಯೋಧ್ಯಾ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದೆ ಇರಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರ ಬದಲು ಯಾವುದೇ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ.
ತನ್ನ ನಿರ್ಧಾರವನ್ನು ಟಿಎಂಸಿ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಆಡಳಿತಾರೂಢ ಬಿಜೆಪಿಯ ರಾಜಕೀಯ ನಿರೂಪಣೆಯ ಜಾಲದೊಳಗೆ ಪಕ್ಷ ಸಿಲುಕುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 2024ರ ಲೋಕಸಭೆ ಚುನಾವಣೆಗೆ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಚಿಮ್ಮುಹಲಗೆಯನ್ನಾಗಿ ಬಳಸಿಕೊಳ್ಳಲು ನೋಡುತ್ತಿದೆ ಎಂದು ಮಮತಾ ನಂಬಿದ್ದಾರೆ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಹೀಗಾಗಿ ಬಿಜೆಪಿಯ ತಾಳಕ್ಕೆ ತಕ್ಕಂತೆ ತಾವು ಕುಣಿಯಬಾರದು ಎಂದು ಟಿಎಂಸಿ ನಿರ್ಧರಿಸಿದೆ. ಸಮಾರಂಭಕ್ಕೆ ತಾವು ಹಾಜರಾದರೆ ಅದು ಬಿಜೆಪಿಯ ಗೆಲುವಿನಂತೆ ಭಾಸವಾಗುತ್ತದೆ ಎನ್ನುವುದು ಮಮತಾ ಅಭಿಪ್ರಾಯ ಎನ್ನಲಾಗಿದೆ. ಅಯೋಧ್ಯಾದಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮತ್ತು ವಿರೋಧ ಪಕ್ಷಗಳ ಪ್ರಮುಖ ನಾಯಕರಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡುತ್ತಿದೆ.