ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ನಾಯಕ ಅನುಪಮ್ ಹಜ್ರಾ (Anupam Hazra) ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತೆಸೆಯಲಾಗಿದೆ. ಲೋಕಸಭೆಯ (Loksabha) ಮಾಜಿ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಕೆಲವು ಸಮಯದಿಂದ ಟೀಕಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕಿದ್ದಾರೆ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಗೃಹ ಸಚಿವ ಅಮಿತ್ ಶಾ (AmitShah) ಮತ್ತು ಜೆ.ಪಿ ನಡ್ಡಾ (JP Nadda) ಅವರು ರಾಜಕೀಯ ಕಾರ್ಯಕ್ರಮಗಳಿಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಸಂದರ್ಭದಲ್ಲಿ ಚರ್ಚಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಪಕ್ಷದೊಳಗಿನ ಭಿನ್ನಮತೀಯರಿಗೆ ಶಿಸ್ತು ಪಾಲಿಸುವಂತೆ ಹಾಗೂ ನಾಯಕತ್ವವನ್ನು ನಿಷ್ಠೆಯಿಂದ ಅನುಸರಿಸುವಂತೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎನ್ನಲಾಗಿದೆ.