ಹುಬ್ಬಳ್ಳಿ: ಭಾರತೀಯ ವೈದ್ಯಕೀಯ ಸಂಘ ಹುಬ್ಬಳ್ಳಿ ಮಹಿಳಾ ಶಾಖೆ, ಆಲ್ ಇಂಡಿಯಾ ಜೈನ್ ಯುಥ್ ಫೆಡರೇಷನ್ನ ಮಹಾವೀರ ಲಿಂಬ್ ಸೆಂಟರ್ ಆಶ್ರಯದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರವನ್ನು ನಗರದ ಕಿಮ್ಸ್ ಪ್ರಾಂಗಣದ ಮಹಾವೀರ ಲಿಂಬ್ ಸೆಂಟರ್ನಲ್ಲಿ ಏರ್ಪಡಿಸಲಾಗಿತ್ತು.
15 ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಮಾಡಲಾಯಿತು. ಮಹಿಳಾ ಶಾಖೆ ಅಧ್ಯಕ್ಷೆ ಡಾ. ಭಾರತಿ ಭಾವಿಕಟ್ಟಿ, ಕಾರ್ಯದರ್ಶಿ ಡಾ. ಆಶಾ ಪಾಟೀಲ, ಲಿಂಬ್ ಸೆಂಟರ್ ಸಂಸ್ಥಾಪಕ ಅಧ್ಯಕ್ಷ ಮಹೇಂದ್ರ ಸಿಂಘಿ, ಡಾ. ಶಶಿಕಲಾ ಹೊಸಮನಿ, ಡಾ. ಜಯಶ್ರೀ ಬಳಿಗಾರ, ಡಾ. ಶಿಲ್ಪಾ ಛಾಟ್ನಿ, ಡಾ. ಸಂಗೀತಾ ಅಂಟರತಾನಿ, ಡಾ. ಕಾಂಚನ ಯು.ಟಿ. ಇತರರು ಇದ್ದರು.