ಹಾಸನ: ಕರ್ನಾಟಕ ರಾಜ್ಯದಲ್ಲಿ ಜನವರಿ ಮೊದಲ ವಾರ ಇಲ್ಲವೇ ಎರಡನೇ ವಾರದಿಂದ ಕೊಬ್ಬರಿಗೆ ಬೆಂಬಲ ಬೆಲೆ ನೀಡಿ ಖರೀದಿ ಮಾಡುವುದಾಗಿ ಕೇಂದ್ರ ಸರಕಾರ ಭರವಸೆ ನೀಡಿದೆ. ಒಂದು ವೇಳೆ ಖರೀದಿ ಮಾಡದಿದ್ದ ಪಕ್ಷದಲ್ಲಿ ಪಾದಯಾತ್ರೆ ಮಾಡುತ್ತೇವೆ ಎಂದು ಮಾಜಿ ಸಚಿವ ಎಚ್. ಡಿ. ರೇವಣ್ಣ ಎಚ್ಚರಿಕೆ ನೀಡಿದ್ಧಾರೆ.
https://ainlivenews.com/eat-these-foods-if-you-are-deficient-in-vitamin-d-in-winter/
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ನೇತೃತ್ವದಲ್ಲಿ ಇತ್ತೀಚೆಗೆ ಪ್ರಧಾನಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಕೊಬ್ಬರಿ ಖರೀದಿಗೆ ಮುಂದಾಗದೇ ಇದ್ದರೆ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ಮಾಡಬೇಕಾಗುತ್ತದೆ ಎಂದು ರೇವಣ್ಣ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ 220 ತಾಲೂಕಲ್ಲಿ ಬರಗಾಲ ಇದೆ. ರೈತರಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಈ ಗ್ಯಾರಂಟಿ ಜಾರಿ ಮಾಡಲಿ, ಕೇಂದ್ರ ಅಥವಾ ರಾಜ್ಯ ಸರಕಾರವಾದರೂ ಪರಿಹಾರ ನೀಡಲಿ, ರೈತರ ನೆರವಿಗೆ ಬರಬೇಕು ಅಷ್ಟೇ ಎಂದು ರೇವಣ್ಣ ತಿಳಿಸಿದರು.