ನೀನಾಸಂ ಸತೀಶ್ ನಟನೆಯ ಬಹುತೇಕ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಇದೇ ಮ್ಯಾಟ್ನಿ ಸಿನಿಮಾದ ಹಾಡೊಂದು ಈ ಹಿಂದೆ ರಿಲೀಸ್ ಆಗಿದ್ದು, ಸಂಜೆ ಮೇಲೆ ಸುಮ್ನೆ ಹಂಗೆ ಹೆಸರಿನ ಗೀತೆಯೂ ಹಿಟ್ ಲಿಸ್ಟ್ ಗೆ ಸೇರ್ಪಡೆ ಆಗಿದೆ. ಹಾಗಾಗಿ ಎಣ್ಣೆ ಸಾಂಗ್ ಕೂಡ ಅದೇ ಸಾಲಿಗೆ ಸೇರಲಿದೆ ಎನ್ನುವ ನಿರೀಕ್ಷೆ ಹುಟ್ಟು ಹಾಕಿದೆ. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ, ಅಯೋಗ್ಯ ಸಿನಿಮಾದ ‘ಏನಮ್ಮಿ ಏನಮ್ಮಿ’ ಹಾಡು 108 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಇದೀಗ ಮತ್ತೆ ಈ ಜೋಡಿಯ ‘ಸಂಜೆ ಮೇಲೆ ಸುಮ್ನೆ ಹಂಗೆ’ (Sanje Mele) ಹಾಡು ವೈರಲ್ ಆಗಿದೆ. ನಿನ್ನೆಯಷ್ಟೇ ರಿಲೀಸ್ ಆಗಿರುವ ‘ಮ್ಯಾಟ್ನಿ’ (Matinee) ಸಿನಿಮಾದ ಈ ಗೀತೆ ಕಡಿಮೆ ಅವಧಿಯಲ್ಲೇ 3.8 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ವೈರಲ್ ಆಗುತ್ತಿದೆ.
ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ. ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.