ಬೆಂಗಳೂರು: ಹೊಸ ವರ್ಷದ (New Year 2024) ಪಾರ್ಟಿ ಮೂಡ್ನ ಬೆಂಗಳೂರಿಗೆ ‘ನಮ್ಮ ಮೆಟ್ರೋ’ (Namma Metro) ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.31 ರ ಮಧ್ಯರಾತ್ರಿಯಿಂದ ಜನವರಿ 1 ರ ಬೆಳಗಿನ ಜಾವ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ.
Bigg News: ಹೊಸವರ್ಷಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ BMTC ಬಸ್ ಬಿಡಲು ನಿರ್ಧಾರ!
2024 ರ ಹೊಸ ವರ್ಷದ ಮುನ್ನಾದಿನ, ನಿಗಮವು ಮೆಟ್ರೋ ರೈಲು ಸೇವೆಗಳನ್ನು ನೇರಳೆ ಮತ್ತು ಹಸಿರು ಮಾರ್ಗದಲ್ಲಿ ವಿಸ್ತರಿಸುತ್ತಿದೆ. ಜ.1 ರ ಮಧ್ಯರಾತ್ರಿ 1:30 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಸೇವೆ ಇರಲಿದೆ. 15 ನಿಮಿಷದ ಅವಧಿಗೆ ಒಂದರಂತೆ ಮೆಟ್ರೋ ಸಂಚರಿಸಲಿವೆ. ಮೆಜೆಸ್ಟಿಕ್ನಿಂದ ಜ.1 ರ ಬೆಳಗಿನ ಜಾವ 2:15 ರ ವರೆಗೆ ಎಲ್ಲಾ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲು ಸೇವೆ ಇರಲಿದೆ
ಸಾರ್ವಜನಿಕರ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಎಂ.ಜಿ. ರೋಡ್ ಮೆಟ್ರೋ ನಿಲ್ದಾಣವನ್ನು ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಡಿ.31 ರ ರಾತ್ರಿ 11 ಗಂಟೆಗೆ ಮುಚ್ಚಲಾಗುವುದು. ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ಇರುವುದಿಲ್ಲ. ಮೆಟ್ರೋ ರೈಲುಗಳು ಪಕ್ಕದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಎಂದಿನಂತೆ ನಿಲ್ಲುತ್ತವೆ.