ಗದಗ: ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಬಂಧನ ಖಂಡಿಸಿ ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕರವೇ ಜಿಲ್ಲಾಧ್ಯಕ್ಷ ಶರಣು ಗೋಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು,
ಸಿ ಎಂ ಸಿಧ್ಧರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿರು. ಕೂಡಲೇ ಟಿ ಎ ನಾರಾಯಣಗೌಡರನ್ನ ಬಿಡುಗಡೆ ಮಾಡಲು ಒತ್ತಾಯ ಮಾಡಿ ಗದಗ ತಹಶಿಲ್ದಾರ ಮೂಲಕ ಸಿಎಂ ಗೆ ಮನವಿ ಸಲ್ಲಿಕೆ ಮಾಡಿದರು.