ದಾವಣಗೆರೆ: ದಾವಣಗೆರೆ ನಗರದಲ್ಲಿ ಆಗಿರುವ ಫುಟ್ ಪಾತ್ ಒತ್ತುವರಿ ತೆರವಿಗೆ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಮಹಾ ನಗರ ಪಾಲಿಕೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಪ್ರಮುಖವಾಗಿ ದಾವಣಗೆರೆ ನಗರದ ಎವಿಕೆ ಕಾಲೇಜು ರಸ್ತೆ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿ ರಸ್ತೆಯಲ್ಲಿ ಅಂಗಡಿಗಳು ರಸ್ತೆಗಳನ್ನ ಒತ್ತುವರಿ ಮಾಡಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.
ಸಾಕಷ್ಟು ಪ್ರಮಾಣದಲ್ಲಿ ವಾಹನಗಳು ಹಾಗೂ ಜನರು ಓಡಾಡುವ ರಸ್ತೆಗಳಲ್ಲಿ ಈ ರೀತಿಯಾಗಿ ಫುಟ್ ಪಾತ್ ಒತ್ತುವರಿ ಆಗಿರುವುದರಿಂದ ಸಾರ್ವಜನಿಕರು ಓಡಾಡಲು ಆಗುತ್ತಿಲ್ಲ. ವಾಹನಗಳಿಂದ ಅಪಘಾತಗಳು ಸಂಭವಿಸುತ್ತಿವೆ. ಕಾಲೇಜು ವಿದ್ಯಾರ್ಥಿಗಳು ಓಡಾಡುವುದು ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ಒತ್ತು ಮಾಡಿ ಅಂಗಡಿ ನಿರ್ಮಿಸಿಕೊಂಡಿರುವ ಹಣ್ಣಿನ ಅಂಗಡಿಗಳು, ರಸ್ತೆ ಬದಿಯ ಬಟ್ಟೆ ಅಂಗಡಿಗಳು,
ಮೊಬೈಲ್ ಶಾಪ್ ಸೇರಿದಂತೆ ಇತರೆ ಅಂಗಡಿಗಳನ್ನ ತೆರವುಗೊಳಿಸಿ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಕರ್ನಾಟಕ ನವ ನಿರ್ಮಾಣ ಸೇನೆಯ ಉಪಾಧ್ಯಕ್ಷ ಶೇರ್ ಅಲಿ ಹಾಗೂ ದಾವಣಗೆರೆ ನಗರ ಮೊಬೈಲ್ ಮೆಕ್ಯಾನಿಕ್ ಅಸೋಸಿಯೇಷನ್ ಪದಾಧಿಕಾರಿಗಳು ಮಹಾ ನಗರ ಪಾಲಿಕೆ ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯ ಮಾಡಿದ್ದಾರೆ.