ಬೆಂಗಳೂರು:- 1.6 ಲಕ್ಷ ಮನೆಗಳ ನಿರ್ಮಾಣ ಮಾರ್ಚ್ ಒಳಗೆ ಪೂರ್ಣಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯಾದ್ಯಂತ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ 2024ರ ಮಾರ್ಚ್ ಒಳಗಾಗಿ ಪೂರ್ಣಗೊಳ್ಳಬೇಕು. ಜತೆಗೆ ರಾಜೀವ್ಗಾಂಧಿ ವಸತಿ ನಿಗಮದಿಂದ ನಿರ್ಮಿಸುತ್ತಿರುವ 52,189 ಮನೆಗಳ ನಿರ್ಮಾಣವನ್ನು ಸರ್ಕಾರದ ಹಣದಿಂದಲೇ ಪೂರ್ಣಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಚಿವ ಸಂಪುಟ ಸಭೆ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು’ ಎಂದರು.
ವಿವಿಧ ವಸತಿ ಯೋಜನೆಗಳಡಿ ವರ್ಷ 3 ಲಕ್ಷ ಮನೆಗಳ ನಿರ್ಮಾಣ ಗುರಿ ಹೊಂದಲಾಗಿತ್ತು. ಇದೀಗ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣವಾಗಿದೆ. ಉಳಿದಂತೆ ನಿರ್ಮಾಣ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು 2024ರ ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.