ಕುಶಾಲನಗರ:- ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕು ಬಿಜೆಪಿಗೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ಯಾವ ನೈತಿಕ ಹಕ್ಕಿಲ್ಲ. ಇದೀಗ ಎಲ್ಲಾ ಹೊರಗೆ ಬರುತ್ತಿದೆ. ಬಿಜೆಪಿಯ ಯತ್ನಾಳ್ರಿಂದಲೇ ಮಾಹಿತಿ ಪಡೆದು ತನಿಖೆ ಮಾಡಿದಲ್ಲಿ ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲಿದೆ ಎಂದರು.
ಈಗಾಗಲೇ ಸಿದ್ದರಾಮಯ್ಯನವರ ಸರ್ಕಾರ ತನಿಖೆ ಸಮಿತಿ ರಚಿಸಿದೆ. ತನಿಖೆಯೂ ನಡೆಯುತ್ತಿದೆ ಎಂದರು. ಇನ್ನು, ಕೋವಿಡ್ ಸಂದರ್ಭ ಬಿಜೆಪಿಯ 40 ಪರ್ಸೆಂಟ್ ಸರ್ಕಾರದ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿತ್ತು ಎಂದು ನೆನಪಿಸಿದರಲ್ಲದೆ, ಇದಕ್ಕೆ ಪೂರಕವಾಗಿ ಬಿಜೆಪಿ ಸರ್ಕಾರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ 40,000 ಕೋಟಿ ರು. ಅಕ್ರಮ ಆರೋಪಿಸಿದ್ದಾರೆ. ಈ ವಿಚಾರದ ಬಗ್ಗೆ ಯತ್ನಾಳ್ ಸರಿಯಾದ ದಾಖಲೆ ಕೊಟ್ಟರೆ ತನಿಖೆಗೆ ಅನುಕೂಲ ಆಗಲಿದೆ ಎಂದವರು ಹೇಳಿದರು.