ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಅದ್ದೂರಿಯಾಗಿ ರಿಲೀಸ್ ಆಗಿದೆ. ಅಭಿಮಾನಿಗಳು ಎರಡೂ ಕೈ ಚಾಚಿ ಈ ಸಿನಿಮಾವನ್ನು ಸ್ವಾಗತಿಸಿದ್ದಾರೆ.
ಸತ್ಯ ಘಟನೆ ಆಧಾರಿತ ಈ ಸಿನಿಮಾ ನೋಡಿ ಹಲವರು ಕಣ್ಣೀರು ಸುರಿಸಿದ್ದಾರೆ. ಇದೀಗ ಸಿನಿಮಾ ಮೊದಲ ಗಳಿಕೆ ಕಂಡದೆಷ್ಟು ಎಂಬ ಕುತೂಹಲ ವೀಕ್ಷಕರಿಗೆ. ಡಿಸೆಂಬರ್ 28ರ ಮಧ್ಯರಾತ್ರಿಯಿಂದಲೇ ಶೋಗಳು ಪ್ರದರ್ಶನ ಕಂಡಿವೆ. ಡಿಸೆಂಬರ್ 29ರ ಬಹುತೇಕ ಶೋಗಳು ಹೌಸ್ಫುಲ್ ಆಗಿವೆ.
ಈ ಚಿತ್ರ ಮೊದಲ ದಿನ ಕರ್ನಾಟಕ ಬಾಕ್ಸ್ ಆಫೀಸ್ನಲ್ಲಿ 19.79 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿಯಾಗಿದೆ. ಒಂದು ವೇಳೆ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದರೆ ಇನ್ನಷ್ಟು ಗಳಿಕೆ ಕಾಣುತ್ತಿತ್ತು ಎನ್ನಲಾಗಿದೆ. ದರ್ಶನ್ ಅವರು ‘ಕಾಟೇರ’ ಸಿನಿಮಾದಲ್ಲಿ ಎರಡು ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಹೊಸ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಸಂದೇಶ ನೀಡುವ ಸಿನಿಮಾ ಕೂಡ ಇದು.