ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ (Vijayendra) ಅವರನ್ನು ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಬಗ್ಗೆ ವಿರೋಧ ಮಾಡೋದು ತಪ್ಪು ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ಶಾಸಕ ಯತ್ನಾಳ್ಗೆ ಕಿವಿಮಾತು ಹೇಳಿದರು.
ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ (Basanagouda Patil Yatnal) ಅವರು ಬಿ.ಎಸ್.ಯಡಿಯೂರಪ್ಪ (Yediyurappa) ಹಾಗೂ ಬಿ.ವೈ.ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಯಾರೇ ಆಗಲಿ ಪಕ್ಷದ ವಿರುದ್ಧವಾಗಿ ಬಹಿರಂಗವಾಗಿ ಮಾತನಾಡಬಾರದು ಎಂದು ಸಲಹೆ ನೀಡಿದರು.
ಏನೇ ಸಮಸ್ಯೆ ಇದ್ದರೂ ಯಾರೇ ಆಗಲಿ ರಾಜ್ಯಾಧ್ಯಕ್ಷರ ಬಳಿ ದೂರು ನೀಡಬೇಕು. ಇಲ್ಲವಾದ್ರೆ ಕೇಂದ್ರ ನಾಯಕರ ಜೊತೆ ಮಾತನಾಡಲಿ. ವರಿಷ್ಠರಾದ ಅಮಿತ್ ಶಾ, ರಾಜನಾಥ್ ಸಿಂಗ್, ರಾಷ್ಟ್ರೀಯ ಅಧ್ಯಕ್ಷರಿದ್ದಾರೆ ಅವರ ಜೊತೆ ಮಾತನಾಡಲಿ. ಈ ಬಗ್ಗೆ ಹೈಕಮಾಂಡ್ ನಾಯಕರು ಕ್ರಮ ಕೈಗೊಳ್ಳುತ್ತದೆ. ಆದರೆ ಹಾದಿ ಬೀದಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದರು.