ಗದಗ:- ಲೊಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಗದಗ ಜಿಲ್ಲೆಯ ಶಿರಹಟ್ಟಿ ವಿಧಾನ ಸಭಾ ಮತಕ್ಷೇತ್ರದ ವ್ಯಾಪ್ತಿಯ ಬಂಕಾಪುರ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗಳನ್ನು ವೀಕ್ಷಿಸಿದ್ರು.
ಇದೇ ವೇಳೆ ಮಾತನಾಡಿದ ಅವರು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹದಗೆಟ್ಟಿರುವ ರಸ್ತೆಗಳ ಕುರಿತು ಶಾಸಕ ಡಾ.ಚಂದ್ರು ಲಮಾಣಿ ಗಮನ ಸೆಳೆದಿದ್ದು, ಹಂತ ಹಂತವಾಗಿ ರಸ್ತೆ ಅಭಿವೃದ್ದಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರಕಾರಕ್ಕೆ ವಿನಂತಿ ಮಾಡಲಾಗುವದು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಡಾ. ಚಂದ್ರು ಲಮಾಣಿ, ವಿ.ಪ. ಸದಸ್ಯ ಎಸ್ ವಿ ಸಂಕನೂರ ಇದ್ರು.